ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಂತರ ಅಯೋಧ್ಯೆಗೆ ಭೇಟಿ ನೀಡುವೆ: ಸಿಎಂ ಸುಖು

Published 9 ಜನವರಿ 2024, 14:21 IST
Last Updated 9 ಜನವರಿ 2024, 14:21 IST
ಅಕ್ಷರ ಗಾತ್ರ

ಶಿಮ್ಲಾ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಂತರ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್‌ ಸುಖು ತಿಳಿಸಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಹೋಗಲು ಆಹ್ವಾನದ ಅಗತ್ಯವಿಲ್ಲ ಎಂದು ಸಿಂಗ್‌ ಹೇಳಿದ್ದಾರೆ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಮ್ಮ ಜೀವನವು ಮರ್ಯಾದಾ ಪುರುಷೋತ್ತಮ ರಾಮನ ಹೆಸರಿನಿಂದ ಪ್ರಾರಂಭವಾಗುತ್ತದೆ. ‘ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ’ ಸಮಾರಂಭದ ನಂತರ ನಾವು ಅಯೋಧ್ಯೆಗೆ ಹೋಗುತ್ತೇವೆ’ ಎಂದು ತಿಳಿಸಿದ್ದಾರೆ.

ಸಚಿವ ವಿಕ್ರಮಾದಿತ್ಯ ಸಿಂಗ್‌ ಅವರು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ ಒಂದು ದಿನದ ನಂತರ ಮುಖ್ಯಮಂತ್ರಿ ಸುಖು ಈ ಹೇಳಿಕೆ ನೀಡಿದ್ದಾರೆ.

ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಆಗುವುದರ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಮೊದಲೇ ಸಿಎಂ ಸುಖು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರನ್ನು ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT