ನವದೆಹಲಿ: ‘ನಮಗಿನ್ನೂ ಅಗತ್ಯ ಕೋವಿಡ್ ಲಸಿಕೆಗಳು ಪೂರೈಕೆಯಾಗದ ಕಾರಣ ಮೇ 1 ರಿಂದ ಕೋವಿಡ್ ಲಸಿಕೆ ಕೇಂದ್ರಗಳ ಹೊರಗೆ ಲಸಿಕೆ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲದಂತೆ 18-44 ವಯಸ್ಸಿನ ಜನರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಆನ್‌ಲೈನ್ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ಮುಂದಿನ ಒಂದೆರಡು ದಿನಗಳಲ್ಲಿ 3 ಲಕ್ಷ ಕೋವಿಶೀಲ್ಡ್ ಲಸಿಕೆಗಳು ಬರಲಿದ್ದು, ಅವುಗಳು ಬಂದ ನಂತರ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಲಾಗುತ್ತದೆ‘ ಎಂದು ಅವರು ಸ್ಪಷ್ಟಪಡಿಸಿದರು.

ನಿಗದಿಯಂತೆ ಮೇ 1 ರಿಂದ 18 ರಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡುವ ಮೂರನೇ ಹಂತದ ಅಭಿಯಾನ ದೇಶದಾದ್ಯಂತ ಆರಂಭವಾಗಲಿದೆ. ದೆಹಲಿ ಸೇರಿದಂತೆ ಕೆಲವು ರಾಜ್ಯಗಳಿಗೆ ಲಸಿಕೆ ಪೂರೈಕೆಯಾಗದ ಕಾರಣ, ಆ ರಾಜ್ಯಗಳಲ್ಲಿ ಮೂರನೇ ಹಂತದ ಲಸಿಕಾ ಅಭಿಯಾನವನ್ನು ಮುಂದೂಡಲಾಗಿದೆ.

‘ಈ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ತಲಾ 67 ಲಕ್ಷ ಡೋಸ್‌ಗಳಿಗಾಗಿ ಬೇಡಿಕೆ ಸಲ್ಲಿಸಿದೆ. ಅಗತ್ಯವಿರುವಷ್ಟು ಲಸಿಕೆಗಳು ಪೂರೈಕೆಯಾದರೆ, ಮುಂದಿನ ಮೂರು ತಿಂಗಳೊಳಗೆ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಗುರಿ ಹೊಂದಿದ್ದೇವೆ‘ ಎಂದು ಕೇಜ್ರಿವಾಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.