ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ಸೂಚಿಸಿದೆ.

ಎಫ್ಐಆರ್ ರದ್ದು ಕೋರಿ ಜನಾರ್ದನ ರೆಡ್ಡಿ ಹಾಗೂ ಅಲಿಖಾನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಜನಾರ್ದನ ರಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ‘ಈ ಪ್ರಕರಣದಲ್ಲಿ ಅರ್ಜಿದಾರರು ಚಿಟ್ ಫಂಡ್ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಒಳಪಡುವುದಿಲ್ಲ. ಪೊಲೀಸರು ದುರುದ್ದೇಶದಿಂದ ಸಿಲುಕಿಸಿದ್ದಾರೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿತು. ‘ಅಲ್ಲಿಯರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ಸಿಸಿಬಿ ಪೊಲೀಸರಿಗೆ ನಿರ್ದೇಶಿಸಿತು.

ಇದಕ್ಕೆ ಸಿಸಿಬಿ ಪರ ವಕೀಲರು, ‘ಪ್ರಕರಣದ ಮತ್ತೊಬ್ಬ ಆರೋಪಿ ಅಲಿಖಾನ್ ಈಗಾಗಲೇ ಸಿಸಿಬಿ ವಶದಲ್ಲಿದ್ದಾರೆ. ಇದೇ 29ರಂದು ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ. 29 ರ ನಂತರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ" ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಸಿಸಿಬಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.