ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳಿಗೆ ನೆಗೆಟಿವ್ ಸುದ್ದಿ ನೀಡಬೇಡಿ: ರಾಹುಲ್ ಗಾಂಧಿ

Last Updated 15 ಸೆಪ್ಟೆಂಬರ್ 2018, 3:19 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದೊಳಗೆ ಭಿನ್ನಮತವನ್ನು ಮಾಧ್ಯಮದ ಮುಂದೆ ಹೇಳಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೆಲಂಗಾಣದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ತೆಲಂಗಾಣ ಅವಧಿಪೂರ್ವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಈ ವೇಳೆ ಪಕ್ಷದಲ್ಲಿ ಅಶಿಸ್ತು ಕಂಡುಬಂದಲ್ಲಿ ಅದನ್ನು ನಾವು ಸಹಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಎಐಸಿಸಿ ಉಸ್ತುವಾರಿ ಆರ್ .ಸಿ ಖುಂಟಿಯಾ ಮತ್ತು ರಾಜ್ಯದ ಕಾಂಗ್ರೆಸ್ ಮುಖ್ಯಸ್ಥ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ 38 ನಾಯಕರೊಂದಿಗೆ ಶುಕ್ರವಾರ ಸಭೆ ನಡೆಸಿದ ರಾಹುಲ್, ಪಕ್ಷದಲ್ಲಿನ ಆಂತರಿಕ ಭಿನ್ನಮತಗಳು ಹೊರಹೋಗದಂತೆ ಎಚ್ಚರ ವಹಿಸಲು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ವಿಧಾನಸಭೆಯನ್ನು ಅವಧಿಪೂರ್ವ ವಿಸರ್ಜಿಸಿದ್ದರು.

ಭಿನ್ನಮತಗಳನ್ನು ಪಕ್ಕಕ್ಕಿಟ್ಟು ಪಕ್ಷಕ್ಕಾಗಿ ಕೆಲಸ ಮಾಡಿ. ಯಾರಿಗಾದರೂ ಸಮಸ್ಯೆಗಳಿದ್ದರೆ ಅದರ ಪರಿಹಾರಕ್ಕಾಗಿ ಕೇಂದ್ರ ಅಥವಾ ರಾಜ್ಯದ ಮುಖಂಡರನ್ನು ಭೇಟಿಯಾಗಿ. ಯಾವುದೇ ಪರಿಸ್ಥಿತಿಯಲ್ಲಿ ಮಾಧ್ಯಮಗಳಿಗೆನಕರಾತ್ಮಕ ಸುದ್ದಿಯನ್ನು ನೀಡಬೇಡಿ ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿರುವುದಾಗಿ ಖುಂಟಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT