ಹೃಷಿಕೇಶ, ಉತ್ತರಾಖಂಡ: ‘ಉತ್ತರಾಖಂಡದ ಆಡಳಿತ ಚುಕ್ಕಾಣಿ ಹಿಡಿದಿರುವ ಹೊಸ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುವುದು. ‘ಡಬಲ್ ಎಂಜಿನ್’ ಚಾಲಿತ ರಾಜ್ಯದ ಅಭಿವೃದ್ಧಿ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ವರ್ಚುವಲ್ ಆಗಿ ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೋವಿಡ್ನ 2ನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಯಿತು. ಇದಕ್ಕೆ ಪ್ರತಿಯಾಗಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಪಿಎಂ ಕೇರ್ಸ್ ನಿಧಿ ನೆರವಿನಿಂದ 1,150 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲೆಯೂ ಇಂಥ ಘಟಕ ಹೊಂದಿದಂತಾಗಿದೆ’ ಎಂದು ಹೇಳಿದರು.

‘ಉತ್ತರಾಖಂಡ ರಾಜ್ಯ ರಚನೆಯಾಗಿ ಇನ್ನೇನು 25 ವರ್ಷಗಳು ತುಂಬಲಿವೆ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ, ಬರುವ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನರು ಹೆಜ್ಜೆ ಹಾಕುವುದು ಅಗತ್ಯ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.