ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಆರ್‌ಡಿಒ ಮುಖ್ಯಸ್ಥ ಸಮೀರ್‌ ಸೇವಾವಧಿ ವಿಸ್ತರಣೆ

Published 27 ಮೇ 2024, 14:48 IST
Last Updated 27 ಮೇ 2024, 14:48 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಸಮೀರ್‌ ವಿ.ಕಾಮತ್‌ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.

‘ಸಚಿವ ಸಂಪುಟದ ನೇಮಕಾತಿ ಸಮಿತಿಯ ಅನುಮತಿ ಮೇರೆಗೆ ಕಾಮತ್‌ ಅವರ ಸೇವಾವಧಿಯನ್ನು ಜೂನ್‌ 1 ರಿಂದ 2025 ಮೇ 31ರವರೆಗೆ ವಿಸ್ತರಿಸಲಾಗಿದೆ’ ಎಂದು ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸಿದ್ಧ ವಿಜ್ಞಾನಿಯಾಗಿರುವ ಕಾಮತ್‌ ಅವರು 2022 ಆಗಸ್ಟ್‌ 25ರಿಂದ ಡಿಆರ್‌ಡಿಒ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT