ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ವಿಮಾನ ನಿಲ್ದಾಣದಲ್ಲಿ ₹6.2 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡ ಡಿಆರ್‌ಐ

Published 20 ಜನವರಿ 2024, 2:09 IST
Last Updated 20 ಜನವರಿ 2024, 2:09 IST
ಅಕ್ಷರ ಗಾತ್ರ

ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೆನೆಜುವೆಲಾದಿಂದ ಆಗಮಿಸಿದ ಪ್ರಯಾಣಿಕರೊಬ್ಬರ ಬಳಿ ₹6.2 ಕೋಟಿ ಮೌಲ್ಯದ 628 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕವಸ್ತುಗಳ ಅಕ್ರಮ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಅಂತರರಾಷ್ಟ್ರೀಯ ಸಿಂಡಿಕೇಟ್‌ನ ಸದಸ್ಯರ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ವೆನೆಜುವೆಲಾ ಆಗಮಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿ ಬಳಿ ₹6.2 ಕೋಟಿ ಮೌಲ್ಯದ 628 ಗ್ರಾಂ ಕೊಕೇನ್ ಹೊಂದಿರುವ ಒಟ್ಟು 57 ಕ್ಯಾಪ್ಸುಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT