ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಕಳ್ಳಸಾಗಣೆ ಮಾಡುತ್ತಿದ್ದ ₹2.4 ಕೋಟಿಯ ಸಿಗರೇಟ್‌ ವಶಪಡಿಸಿಕೊಂಡ ಡಿಆರ್‌ಐ

Published 31 ಡಿಸೆಂಬರ್ 2023, 6:47 IST
Last Updated 31 ಡಿಸೆಂಬರ್ 2023, 6:47 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ಏರ್‌ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹2.4 ಕೋಟಿ ಮೌಲ್ಯದ ಸಿಗರೇಟ್‌ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ವಶಪಡಿಸಿಕೊಂಡಿದೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ದುಬೈನಿಂದ ಬಂದ ಆಮದು ಸರಕುಗಳನ್ನು ತಡೆ ಹಿಡಿದು ಅಧಿಕಾರಿಗಳು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಬಟ್ಟೆಗಳ ಮಧ್ಯದಲ್ಲಿ ಸಿಗರೇಟ್‌ ಪೆಟ್ಟಿಗೆಗಳನ್ನು ಬಚ್ಚಿಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು ₹2.4 ಕೋಟಿ ಮೌಲ್ಯದ ಸಿಗರೇಟ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳಸಾಗಣೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT