ನವದೆಹಲಿ: ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಗಂಭೀರವಾದ ದುರ್ನಡತೆ ಮಾತ್ರವಲ್ಲ, ಅದು ಅಪರಾಧವೂ ಹೌದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ, ‘ಮದ್ಯ ಕುಡಿದ ಯಾವ ವ್ಯಕ್ತಿಗೂ ವಾಹನ ಚಾಲನೆ ಮಾಡಲು ಅನುಮತಿ ನೀಡಬಾರದು. ಮದ್ಯ ಕುಡಿದು ವಾಹನ ಚಾಲನೆ ಮಾಡುವುದು ಹಾಗೂ ಆ ಮೂಲಕ ಇತರರ ಜೀವದೊಂದಿಗೆ ಚೆಲ್ಲಾಟವಾಗುವುದು ಗಂಭೀರವಾದ ದುರ್ನಡತೆ’ ಎಂದು ಹೇಳಿತು.

ಉತ್ತರ ಪ್ರದೇಶದ ಪ್ರಾಂತೀಯ ಸಶಸ್ತ್ರ ಪೊಲೀಸ್ (ಪಿಎಸಿ) ಪಡೆಯನ್ನು ಕರೆದೊಯ್ದ ಟ್ರಕ್‌ನ ಚಾಲಕನೊಬ್ಬ ಕುಡಿದು ವಾಹನ ಚಾಲನೆ ಮಾಡಿದ್ದ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.

2000ದಲ್ಲಿ ಕುಂಭಮೇಳಕ್ಕೆ ಅಲಹಾಬಾದ್‌ನಿಂದ ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುವಾಗ, ಕುಡಿದು ವಾಹನ ಚಾಲನೆ ಮಾಡಿದ್ದ ಎಂಬ ಆರೋಪ ಎದುರಿಸುತ್ತಿರುವ ಟ್ರಕ್ ಚಾಲಕನಿಗೆ ಕಡ್ಡಾಯ ನಿವೃತ್ತಿ ನೀಡಬೇಕು’ ಎಂದು ನ್ಯಾಯಪೀಠ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.