ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಡ್ರೋಣ್‌ ಹಾರಾಟ: ತನಿಖೆಗೆ ಆದೇಶ

Published 3 ಜುಲೈ 2023, 4:42 IST
Last Updated 3 ಜುಲೈ 2023, 4:42 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸ ಮೇಲೆ ಇಂದು ಬೆಳಿಗ್ಗೆ (ಸೋಮವಾರ) ಡ್ರೋಣ್‌ ಹಾರಾಟ ನಡೆಸಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಡ್ರೋಣ್‌ ಒಂದು ಪ್ರಧಾನಿಯವರ ನಿವಾಸದ ಮೇಲೆ ಹಾರಾಡುವುದು ಗಮನಕ್ಕೆ ಬಂದಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಡ್ರೋಣ್‌ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

ಪ್ರಧಾನ ಮಂತ್ರಿಗಳ ನಿವಾಸ ‘ಹಾರಾಟ ನಿಷೇಧಿತ ವಲಯ‘ದ ಅಡಿ ಬರುತ್ತದೆ.

ತನಿಖೆ ಪ್ರಗತಿಯಲ್ಲಿದ್ದು, ಸಂಶಯಾಸ್ಪದವಾದುದ್ದು ಯಾವುದೂ ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

‘ಪ್ರಧಾನಿಯವರ ನಿವಾಸದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ ಯಾವುದೇ ವಸ್ತುಗಳು ಕಂಡು ಬಂದಿಲ್ಲ. ಈ ಬಗ್ಗೆ ವಾಯು ಸಂಚಾರ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಲಾಗಿದ್ದು, ‍ಪ್ರಧಾನಿ ನಿವಾಸದ ಬಳಿ ಯಾವುದೇ ಹಾರಾಟದ ವಸ್ತು ಕಂಡು ಬಂದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ‘ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT