ವಿಪತ್ತಿನ ವೇಳೆ, ಅಧಿಕಾರಿಗಳು ನದಿಪಾತ್ರದ ಹಳ್ಳಿಗಳಿಗೆ ತೆರಳಿ ಜನರಿಗೆ ಮುನ್ಸೂಚನೆ ನೀಡುವುದು ಕಷ್ಟಕರವಾಗಿರುತ್ತದೆ. ಅಲ್ಲದೆ, ಹೆಚ್ಚಿನ ಸಮಯವನ್ನೂ ತೆಗೆದುಕೊಳ್ಳುತ್ತದೆ. ಹೀಗಾಗಿ, ತಮಟೆ ಬಡಿಯುವ ಮೂಲಕ ಸಾರುವ ಸಾಂಪ್ರದಾಯಿಕ ಪದ್ಧತಿಯನ್ನು ಕೈಬಿಟ್ಟು ಡ್ರೋನ್‌ಗಳ ನೆರವು ಪಡೆಯಲು ಮುಂದಾಗಿದ್ದೇವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.