ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ದಂಧೆ: ನಟ ಸುಶಾಂತ್‌ ಮನೆಗೆಲಸದ ಸಹಾಯಕ ದೀಪೇಶ್‌ ಸಾವಂತ್‌‌ ಬಂಧನ

Last Updated 5 ಸೆಪ್ಟೆಂಬರ್ 2020, 16:13 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನಲ್ಲಿ ಡ್ರಗ್ಸ್‌ ದಂಧೆಗೆ ಸಂಬಂಧಿಸಿದಂತೆ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮನೆಗೆಲಸದಸಹಾಯಕ ದೀಪೇಶ್‌ ಸಾವಂತ್‌ನನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಮಾದಕವಸ್ತುಗಳ ಸಂಗ್ರಹಣೆ, ಬಳಕೆ ಮತ್ತು ಸಾಗಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೀಪೇಶ್‌ ಸಾವಂತ್‌ ಎಂಬಾತನ ಪಾತ್ರವಿದೆ ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದ ಎನ್‌ಸಿಬಿಯು ದೀಪೇಶ್‌ನ ಹೇಳಿಕೆ ಮತ್ತು ಡಿಜಿಟಲ್‌ ಸಾಕ್ಷ್ಯಗಳ ಆಧಾರದ ಮೇಲೆ ಆತನನ್ನು ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಯನ್ನು ನಾಳೆ (ಭಾನುವಾರ) ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎನ್‌ಸಿಬಿಯ ಉಪ ನಿರ್ದೇಶಕ ಕೆ.ಪಿ.ಎಸ್‌.ಮಲ್ಹೋತ್ರ ತಿಳಿಸಿದ್ದಾರೆ.

ಎನ್‌ಸಿಬಿ ಕಸ್ಟಡಿಗೆ ರಿಯಾ ಚಕ್ರವರ್ತಿ ಸಹೋದರ ಶೋವಿಕ್‌, ಸ್ಯಾಮುಯೆಲ್ ಮಿರಾಂಡ

ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ನಿರ್ವಾಹಕರಾಗಿದ್ದ ಸ್ಯಾಮುಯೆಲ್ ಮಿರಾಂಡ ಅವರನ್ನು ಸೆಪ್ಟೆಂಬರ್ 9ರ ವರೆಗೆ ಮಾದಕವಸ್ತು ನಿಯಂತ್ರಣ ದಳದ(ಎನ್‌ಸಿಬಿ) ಕಸ್ಟಡಿಗೆ ನೀಡಲಾಗಿದೆ.

ಬಾಲಿವುಡ್‌ನಲ್ಲಿ ಡ್ರಗ್ಸ್‌ ಜಾಲಕ್ಕೆ ಸಂಬಂಧಿಸಿದಂತೆ ಶೋವಿಕ್‌ ಚಕ್ರವರ್ತಿ ಮತ್ತು ಸ್ಯಾಮುಯೆಲ್‌ ಮಿರಾಂಡ ಅವರನ್ನು ಎನ್‌ಸಿಬಿ ಶುಕ್ರವಾರ ವಶಕ್ಕೆ ಪಡೆದಿತ್ತು. ಅವರಿಬ್ಬರ ಸುದೀರ್ಘ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡಬೇಕೆಂದು ಎನ್‌ಸಿಬಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಇದಕ್ಕೆ ಒಪ್ಪಿಗೆ ಸೂಚಿಸಿರುವ ಮುಂಬೈನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು ಸೆ.09ರ ವರೆಗೂ ಎನ್‌ಸಿಬಿ ಕಸ್ಟಡಿಗೆ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎನ್‌ಸಿಬಿಯಿಂದ ಬಂಧಿಸಲ್ಪಟ್ಟ ಮತ್ತೊಬ್ಬ ಆರೋಪಿ ಕೈಜನ್ ಇಬ್ರಾಹಿಂ ಅವರನ್ನು ಸೆ.19ರ ವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT