ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

328 ಔಷಧಗಳ ನಿಷೇಧ ಮಾಡಿದ ಕೇಂದ್ರ ಸರ್ಕಾರ

Last Updated 13 ಸೆಪ್ಟೆಂಬರ್ 2018, 11:31 IST
ಅಕ್ಷರ ಗಾತ್ರ

ನವದೆಹಲಿ: ನಿಗದಿತ ಪ್ರಮಾಣದ ಔಷಧಗಳ ಸಂಯೋಜನೆಯ (ಎಫ್‌ಡಿಸಿ)328 ಔಷಧಗಳ ಉತ್ಪಾದನೆ, ಮಾರಾಟ ಮತ್ತು ವಿತರಣೆಯನ್ನುಕೇಂದ್ರ ಆರೋಗ್ಯ ಸಚಿವಾಲಯ ಬುಧವಾರದಿಂದಲೇ ಜಾರಿಗೆ ಬರುವಂತೆ ನಿಷೇಧಿಸಿದೆ.

ಎರಡು ಅಥವಾ ಅದಕ್ಕಿಂತ ಹೆಚ್ಚಿನ ನಿಗದಿತ ಪ್ರಮಾಣದ ಔಷಧಗಳ ಸಂಯೋಜನೆಯಿಂದ ತಯಾರಿಸುವ ಔಷಧಗಳಿಗೆ ಮಾತ್ರ ಈ ನಿಷೇಧ ಅನ್ವಯಿಸಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಔಷಧಗಳು ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣ ನಿಷೇಧ ಹೇರಲಾಗಿದೆ ಪ್ರಕಟಣೆ ತಿಳಿಸಿದೆ.

ಈ ಸಂಯೋಜನೆಗಳನ್ನು ಬಳಸಿಕೊಂಡು ವಿವಿಧ ರೀತಿಯ ಔಷಧಗಳನ್ನು ತಯಾರಿಸಲಾಗುತ್ತಿದೆ. ಆದರೆ, ಇದು ಸರಿಯಾದ ಕ್ರಮ ಅಲ್ಲ. ವಿವಿಧ ಹೆಸರುಗಳಲ್ಲಿ ಈ ಔಷಧಗಳು ಭಾರತದಲ್ಲಿ ಮಾರಾಟವಾಗುತ್ತಿವೆ. ಔಷಧ ತಜ್ಞರ ಶಿಫಾರಸು ಆಧಾರದಲ್ಲಿ ಈ ಕ್ರಮ
ಕೈಗೊಳ್ಳಲಾಗಿದೆ.

ನಿಷೇಧಕ್ಕೆ ಸಂಬಂಧಿಸಿ ಸರ್ಕಾರ ಮತ್ತು ಔಷಧ ಕಂಪನಿಗಳ ನಡುವೆ ಎರಡು ವರ್ಷಗಳಿಂದ ಕಾನೂನು ಹೋರಾಟ ನಡೆಯುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT