ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 6 ಕೆಜಿ ಕೊಕೇನ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಶುಕ್ರವಾರ ಬಾರಾಮುಲ್ಲಾ ಜಿಲ್ಲೆಯ ಓಲ್ಡ್ ಟೌನ್‌ನಿಂದ ಇವರನ್ನು ಬಂಧಿಸಿದ್ದು ಇವರ ಬಳಿಯಿಂದ 6 ಪ್ಯಾಕೆಟ್ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ವಸ್ತು ಕೊಕೇನ್‌ನಂತಿದ್ದು ಸುಮಾರು 6 ಕೆಜಿ ತೂಕವಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೆಕ್ಷನ್ 8/21-29 ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜೂನ್ ತಿಂಗಳಲ್ಲಿ ಪೊಲೀಸರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದು ಅವರಿಂದ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದರು. ಸೆಪ್ಟೆಂಬರ್ 14ರಂದು ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ 35 ಕೋಟಿ ಮೌಲ್ಯದ 7 ಕೆಜೆ ಹೆರಾಯಿನ್ ಪತ್ತೆಯಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.