ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂ | ₹9 ಕೋಟಿ ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ

Published 16 ಜೂನ್ 2024, 6:00 IST
Last Updated 16 ಜೂನ್ 2024, 6:00 IST
ಅಕ್ಷರ ಗಾತ್ರ

ಗುವಾಹಟಿ: 'ಅಸ್ಸಾಂನ ಕರೀಮ್‌ಗಂಜ್ ಜಿಲ್ಲೆಯಲ್ಲಿ ಸುಮಾರು ₹9 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ' ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇಂದು (ಭಾನುವಾರ) ತಿಳಿಸಿದ್ದಾರೆ.

ಕರೀಮ್‌ಗಂಜ್ ಪೊಲೀಸರು ಹಾಗೂ ಬಿಎಸ್‌ಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ವಾಹನದಿಂದ ₹9 ಕೋಟಿ ಮೌಲ್ಯದ ಯಾಬಾ ಮಾತ್ರೆಗಳನ್ನು (YABA Tablets) ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಹಿಮಂತ, ಕಳ್ಳಸಾಗಣೆ ಯತ್ನವನ್ನು ಬೇಧಿಸಿರುವ ರಾಜ್ಯ ಪೊಲೀಸ್ ಹಾಗೂ ಬಿಎಸ್‌ಎಫ್‌‌ ಜಂಟಿ ಭದ್ರತಾ ಪಡೆಯನ್ನು ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT