ಕೋಟ(ರಾಜಸ್ಥಾನ): ಕುಡಿದ ಮತ್ತಿನಲ್ಲಿದ್ದ 28 ವರ್ಷದ ವ್ಯಕ್ತಿಯೊಬ್ಬ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ತನ್ನ 52 ವರ್ಷದ ತಾಯಿ ಜೊತೆ ಕಾಲ್ನಡಿಗೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿ ಈ ದುಷ್ಕೃತ್ಯ ಎಸಗಿದ್ದಾನೆ.
ಘಟನೆ ಬಳಿಕ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ಡಬಿ ಪೊಲೀಸ್ ಠಾಣೆಗೆ ಬಂದು ಮಹಿಳೆ ತನ್ನ ಹಿರಿಯ ಮಗನ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ತಪ್ಪೊಪ್ಪಿಕೊಂಡ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ, ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತನ್ನ ಮಗನ ಜೊತೆ ತಾಯಿಯು ಸಹೋದರನ ಮನೆಗೆ ತೆರಳಿದ್ದರು. ಅಲ್ಲಿಂದ ಹಿಂದಿರುಗುವಾಗ ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ.
‘ನಾವು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದು ಡಿಎಸ್‌ಪಿ ತರುಣ್ ಕಾಂತ್ ಸೊಮನಿ ತಿಳಿಸಿದ್ದಾರೆ.