ನವದೆಹಲಿ: ಕೋವಿಡ್ ಲಸಿಕೆ ನೀಡುವ ತಾಲೀಮು ಜ. 2ರಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ.

ಬರುವ ದಿನಗಳಲ್ಲಿ ಲಸಿಕೆ ನೀಡುವ ಬೃಹತ್ ಲಸಿಕಾ ಕಾರ್ಯಕ್ರಮ ನಡೆಯುವುದು. ಅದಕ್ಕೂ ಮುನ್ನ, ಲಸಿಕೆ ನೀಡುವಾಗ ಎದುರಾಗಬಹುದಾದ ಸಮಸ್ಯೆಗಳು, ಯೋಜನೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ತಾಲೀಮು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಲಸಿಕೆ ನೀಡುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ‘ಕೋ–ವಿನ್’ ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ ಬಳಕೆ ಎಷ್ಟರ ಮಟ್ಟಿಗೆ ಕಾರ್ಯಸಾಧು ಎಂಬುದನ್ನು ತಿಳಿದುಕೊಳ್ಳಲು ಸಹ ಈ ತಾಲೀಮು ನೆರವಾಗಲಿದೆ. ಮುಂದಿನ ದಿನಗಳಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ತಾಲೀಮು ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು. ಸಚಿವಾಲಯದ ಹಿರಿಯ ಅಧಿಕಾರಿಗಳು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.