ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರಷ್ಟಾಚಾರದಿಂದ ಆರಂಭ, ಭಯೋತ್ಪಾದನೆಯಲ್ಲಿ ಕೊನೆ: Cong-SPಗೆ ಆದಿತ್ಯನಾಥ್ ಟೀಕೆ

Published 25 ಮೇ 2024, 4:53 IST
Last Updated 25 ಮೇ 2024, 4:53 IST
ಅಕ್ಷರ ಗಾತ್ರ

ಲಖನೌ: ದೇಶದಲ್ಲಿ ಕಾಂಗ್ರೆಸ್‌ ಮತ್ತು ರಾಜ್ಯದಲ್ಲಿ (ಉತ್ತರ ಪ್ರದೇಶ) ಸಮಾಜವಾದಿ ಪಕ್ಷ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ ದಿನವಿಡೀ ಭ್ರಷ್ಟಾಚಾರದ ಸುದ್ದಿಗಳಿಂದ ಪ್ರಾರಂಭವಾಗಿ ಭಯೋತ್ಪಾದಕ ದಾಳಿಯೊಂದಿಗೆ ಕೊನೆಗೊಳ್ಳುತ್ತಿದ್ದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಗೋರಖ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ದೇಶದಿಂದ ನಿರ್ಮೂಲನೆ ಮಾಡಲಾಗಿದೆ. ಆದರೆ, ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಆಡಳಿತದ ಅವಧಿಯಲ್ಲಿ, ದಿನಗಳು ಹಗರಣದ ಸುದ್ದಿಗಳಿಂದ ಪ್ರಾರಂಭವಾಗಿ ಭಯೋತ್ಪಾದಕ ದಾಳಿಯೊಂದಿಗೆ ಕೊನೆಗೊಳ್ಳುತ್ತಿತ್ತು’ ಎಂದು ತಿಳಿಸಿದ್ದಾರೆ.

‘ಇದು ನವ ಭಾರತವಾಗಿದೆ. ಪ್ರಧಾನಿ ಮೋದಿ ಅವರ ಸರ್ಕಾರವು ದೇಶದ ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸುತ್ತಿದೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ನಡುವಿನ ಮೈತ್ರಿ ಯಾವಾಗಲೂ ದುರಂತಕ್ಕೆ ಕಾರಣವಾಗಿದೆ’ ಎಂದು ಆದಿತ್ಯನಾಥ್‌ ಹೇಳಿದ್ದಾರೆ.

ಕಾಂಗ್ರೆಸ್‌ ಮತ್ತು ‘ಇಂಡಿಯಾ’ ಮೈತ್ರಿಕೂಟದ ಇತರ ಪಕ್ಷಗಳು ದೇಶಕ್ಕೆ ದೊಡ್ಡ ಹಾನಿ ಉಂಟು ಮಾಡಿವೆ. ವಿರೋಧ ಪಕ್ಷದವರು ಅಧಿಕಾರಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಸಾಮಾಜಿಕ ವ್ಯವಸ್ಥೆಯ ರಚನೆಯನ್ನು ಹಾಳು ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ತೃಣಮೂಲ ಕಾಂಗ್ರೆಸ್‌ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಲು ಪ್ರಯತ್ನಿಸಿತ್ತು. ಧರ್ಮ ಆಧಾರಿತ ಮೀಸಲಾತಿ ದೇಶದ ವಿಭಜನೆಗೆ ಮತ್ತಷ್ಟು ಅಡಿಪಾಯ ಹಾಕಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT