ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ ಪ್ರವಾಸದ ವೇಳೆ ರಾಹುಲ್ ಅವರಿಂದ ದೇಶಕ್ಕೆ ಅವಮಾನ: ಅನುರಾಗ್ ಠಾಕೂರ್

Published 31 ಮೇ 2023, 9:33 IST
Last Updated 31 ಮೇ 2023, 9:33 IST
ಅಕ್ಷರ ಗಾತ್ರ

ನವದೆಹಲಿ: ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶಕ್ಕೆ ಅವಮಾನ ಎಸಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪ ಮಾಡಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅನುರಾಗ್, ಮೋದಿ ಜನಪ್ರಿಯತೆಯನ್ನು ರಾಹುಲ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಅನುರಾಗ್ ಹೇಳಿಕೆಯನ್ನು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಇತ್ತೀಚೆಗೆ ಆಸ್ಟ್ರೇಲಿಯಾ ಪ್ರವಾಸದ ವೇಳೆ ಮೋದಿ ಅವರನ್ನು ಅಲ್ಲಿನ ಪ್ರಧಾನಿ ಬಾಸ್ ಎಂದು ಸಂಬೋಧನೆ ಮಾಡಿರುವುದನ್ನು ಉಲ್ಲೇಖ ಮಾಡಿರುವ ಅನುರಾಗ್, ರಾಹುಲ್‌ಗೆ ತಿರುಗೇಟು ನೀಡಿದ್ದಾರೆ.

ವಿದೇಶ ಪ್ರವಾಸದ ವೇಳೆ ರಾಹುಲ್ ಗಾಂಧಿ ಭಾರತವನ್ನು ಅವಮಾನಿಸಿದ್ದಾರೆ. ಪ್ರಧಾನಿ ಮೋದಿ ಇತ್ತೀಚಿನ ವಿದೇಶ ಪ್ರವಾಸದ ವೇಳೆ ವಿವಿಧ ದೇಶಗಳ 24 ಪ್ರಧಾನಿ ಮತ್ತು ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. 50ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ. ಪಿಎಂ ಮೋದಿಯೇ ಬಾಸ್ ಎಂದು ಆಸ್ಟ್ರೇಲಿಯಾದ ಪ್ರಧಾನಿ ಹೇಳಿದಾಗ ಅದನ್ನು ರಾಹುಲ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ತಮ್ಮ ಹೇಳಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ದೇವರ ಪಕ್ಕ ಕೂರಿಸಿದರೆ ಬ್ರಹ್ಮಾಂಡ ಹೇಗೆ ಕೆಲಸ ಮಾಡುತ್ತದೆ ಎಂದು ವಿವರಿಸುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT