ಮಥುರಾ (ಉತ್ತರ ಪ್ರದೇಶ): ಇಂದು ವಿಶ್ವ ಭೂ ದಿನ. ಈ ಸಂದರ್ಭದಲ್ಲಿ, ಯಮುನಾ ನದಿಯನ್ನು ಸ್ವಚ್ಛವಾಗಿಡಲು ಪ್ರತಿಜ್ಞೆ ಮಾಡುವಂತೆ ಮಥುರಾ ಸಂಸದೆ ಹೇಮಾ ಮಾಲಿನಿ ಜನರಲ್ಲಿ ಮನವಿ ಮಾಡಿದ್ದಾರೆ.

'ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' (ಪಿಎಂಎಸ್ಜಿಎಂಬಿವೈ) ಬಗ್ಗೆಯೂ ಮಾತನಾಡಿದ ಸಂಸದೆ, ಈ ಯೋಜನೆಯು ಜನರಿಗೆ ಹಣವನ್ನು ಉಳಿಸಲು ಅವಕಾಶ ನೀಡುವುದಲ್ಲದೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಿದೆ ಎಂದು ಹೇಳಿದ್ದಾರೆ.

ಸೌರವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ ಆರಂಭಿಸಿದ್ದು, 2024ರ ಫೆಬ್ರುವರಿ 13 ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ತಲಾ 300 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವ ಗುರಿಯನ್ನು ಈ ಯೋಜನೆಯು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.