ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಲಘು ಭೂಕಂಪ

Published 8 ಡಿಸೆಂಬರ್ 2023, 5:52 IST
Last Updated 8 ಡಿಸೆಂಬರ್ 2023, 5:52 IST
ಅಕ್ಷರ ಗಾತ್ರ

ಚೆಂಗಲ್‌ಪಟ್ಟು, ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಬೆಳಗ್ಗೆ 7:39ರ ಸುಮಾರಿಗೆ ಭೂಕಂಪ ಸಂಭವಿಸಿದೆ.

‘08-12-2023ರ ಬೆಳಿಗ್ಗೆ 07:39ರ ಸುಮಾರಿಗೆ ರಿಕ್ಟರ್‌ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಮಿಯ 10 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು’ ಎಂದು ಎನ್‌ಸಿಎಸ್ ತಿಳಿಸಿದೆ.

ಮಳೆಯ ಅಬ್ಬರದಿಂದ ತತ್ತರಿಸಿರುವ ತಮಿಳುನಾಡು ಈಗತಾನೆ ಚೇತರಿಸಿಕೊಳ್ಳುತ್ತಿದೆ. ಈ ನಡುವೆ ಚೆಂಗಲ್‌ಪಟ್ಟು, ಚೆನ್ನೈ, ತಿರುವಳ್ಳೂರ್, ಕಾಂಚೀಪುರಂಗಳಲ್ಲಿ ಮತ್ತೆ ಸಾಧಾರಣ ಮಳೆಯಾಗಲಿದೆ ಎಂದು ಚೆನ್ನೈನಲ್ಲಿರುವ ಸ್ಥಳೀಯ ಹವಾಮಾನ ಕೇಂದ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT