ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌ನಲ್ಲಿ ಭೂಕಂಪ: 5.2 ತೀವ್ರತೆ ದಾಖಲು

Published 20 ಫೆಬ್ರುವರಿ 2024, 2:55 IST
Last Updated 20 ಫೆಬ್ರುವರಿ 2024, 2:55 IST
ಅಕ್ಷರ ಗಾತ್ರ

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

ಕಾರ್ಗಿಲ್‌ನ ವಾಯವ್ಯಕ್ಕೆ 148 ಕಿಮೀ ದೂರದಲ್ಲಿ ಕಂಪನದ ಆಳವು ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಕೆಳಗೆ ದಾಖಲಾಗಿದೆ. ಭೂಕಂಪನದ ಹೊರತಾಗಿಯೂ, ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ.

ಮಂಗಳವಾರ ಜಮ್ಮುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. 

ಬೆಳಗ್ಗೆ 11.30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT