ನವದೆಹಲಿ: ಎಬೋಲಾ ವೈರಾಣು ಸೋಂಕು ವ್ಯಾಪಕವಾಗಿರುವುದರಿಂದ ಕಾಂಗೊ, ಉಗಾಂಡ ಮತ್ತು ದಕ್ಷಿಣ ಸುಡಾನ್ಗೆ ಅನಗತ್ಯವಾಗಿ ಪ್ರಯಾಣ ಮಾಡಬಾರದು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಎಬೋಲಾ ಪೀಡಿತ ದೇಶಗಳಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುವ ಭಾರತೀಯರು ಸ್ಥಳೀಯ ಆಡಳಿತಗಳು ಪ್ರಕಟಿಸಿರುವ ಆರೋಗ್ಯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿತರ ಸಂಪರ್ಕ ಮಾಡಬಾರದು ಮತ್ತು ಜ್ವರ ಅಥವಾ ಇತರ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಎಬೋಲಾದ ರೂಪಾಂತರ ಬುಂಡಿಬುಗ್ಯೊ ವೈರಸ್ನಿಂದ ಉಂಟಾಗುವ ಸೋಂಕು ನಿಯಂತ್ರಣಕ್ಕೆ ಯಾವುದೇ ಲಸಿಕೆ ಅಥವಾ ಚಿಕಿತ್ಸೆ ಇಲ್ಲ. ಭಾರತದಲ್ಲಿ ಈವರೆಗೆ ಎಬೋಲಾ ಸೋಂಕು ಪತ್ತೆಯಾಗಿಲ್ಲ ಎಂದು ಮಾರ್ಗಸೂಚಿ ತಿಳಿಸಿದೆ.

ಆಫ್ರಿಕಾ ರಾಷ್ಟ್ರಗಳಲ್ಲಿ ಬುಂಡಿಬುಗ್ಯೊ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ವಿಶ್ವಸಂಸ್ಥೆಯು ಮೇ 17ರಂದು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು.

ಆಂಧ್ರದಲ್ಲೂ ‘ಹೈ–ಅಲರ್ಟ್’: ಎಬೋಲಾ ಸೋಂಕು ಹರಡುವುದನ್ನು ತಡೆಯಲು ಆಂಧ್ರಪ್ರದೇಶದಲ್ಲಿಯೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.