ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಗಾಳಿ: ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಣೆ

Published 2 ಮೇ 2024, 5:04 IST
Last Updated 2 ಮೇ 2024, 5:04 IST
ಅಕ್ಷರ ಗಾತ್ರ

ಹೈದರಾಬಾದ್‌: ಗರಿಷ್ಠ ತಾಪಮಾನ ವರದಿಯಾಗುತ್ತಿರುವ ಹಿನ್ನೆಲೆ ತೆಲಂಗಾಣದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ಒಂದು ಗಂಟೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಮತದಾನವು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಗೆ ಬದಲು 7ರಿಂದ 6 ಗಂಟೆಯವರೆಗೆ ನಡೆಯಲಿದೆ.

‘ರಾಜ್ಯದಲ್ಲಿನ ಬಿಸಿಗಾಳಿ ವಾತಾವರಣ ಮತದಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು, ಅಭ್ಯರ್ಥಿಗಳು ಅಭಿಪ್ರಾಯಪಟ್ಟಿದ್ದು, ತೆಲಂಗಾಣದ ಮುಖ್ಯ ಚುನಾವಣಾ ಅಧಿಕಾರಿಯ ಮನವಿಯ ಮೇರೆಗೆ ಮತದಾನದ ಸಮಯವನ್ನು ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದು ಆಯೋಗ ತಿಳಿಸಿದೆ.

ಪರಿಷ್ಕೃತ ಸಮಯವು 12 ಲೋಕಸಭಾ ಕ್ಷೇತ್ರಗಳಾದ ಕರೀಂನಗರ, ನಿಜಾಮಾಬಾದ್, ಜಹೀರಾಬಾದ್, ಮೇದಕ್, ಮಲ್ಕಾಜ್‌ಗಿರಿ, ಸಿಕಂದರಾಬಾದ್, ಹೈದರಾಬಾದ್, ಚೆವೆಲ್ಲಾ, ಮೆಹಬೂಬ್‌ನಗರ, ನಾಗರಕರ್ನೂಲ್(ಮೀಸಲು ಕ್ಷೇತ್ರ), ನಲ್ಗೊಂಡ ಮತ್ತು ಭೋಂಗಿರ್‌ನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನ್ವಯಿಸಲಿದೆ. ಉಳಿದ ಐದು ಲೋಕಸಭಾ ಕ್ಷೇತ್ರಗಳ ಕೆಲವು ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಆಯೋಗವು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ರಾಜ್ಯದ ಎಲ್ಲಾ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT