ನವದೆಹಲಿ: ಪ್ರಸಕ್ತ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕೆ ಪೂರಕವಾಗಿ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಮನೆ ಮನೆಗೂ ತೆರಳಿ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ಉದ್ದೇಶಿಸಿದೆ. ಈ ಮೂಲಕ ಮತದಾರರ ಪಟ್ಟಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳಲು ಆಯೋಗ ಬಯಸಿದೆ.

ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆ ಮತ್ತು ತೆಗೆದು ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮತ್ತು ಇತರರು ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಿರುವ ಆಯೋಗವು, ಮತದಾರರ ಮನೆಗಳಿಗೆ ಭೇಟಿ ನೀಡಿದ ಬಳಿಕವಷ್ಟೇ ಪಟ್ಟಿ ಪರಿಷ್ಕರಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲ ಮಾಡಿಕೊಡಲು ಮತದಾರರ ದತ್ತಾಂಶ ತಿರುಚುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಕೆಲ ರಾಜಕೀಯ ಪಕ್ಷಗಳು ಆರೋಪ ಮಾಡಿದ ಬೆನ್ನಲ್ಲೇ, ಆಯೋಗ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಿದೆ.

ದೇಶದಾದ್ಯಂತ ನಡೆಯುವ ಚುನಾವಣೆ, ಉಪ ಚುನಾವಣೆಗಳಿಗೂ ಮುನ್ನ ಆಯೋಗವು ಮತದಾರರ ಪಟ್ಟಿಗಳನ್ನು ನಿಯಮಿತವಾಗಿ ಪರಿಷ್ಕರಿಸುತ್ತದೆ. ಮತದಾರರ ಸಾವು, ಹೊಸ ಸೇರ್ಪಡೆ, ವಿಳಾಸ ಬದಲು ಕಾರಣಗಳಿಂದಾಗಿ ಈ ಪರಿಷ್ಕರಣೆಗಳು ನಡೆಯುತ್ತಿರುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.