ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಪಾಲಿಸದ ಪಕ್ಷಗಳ ಮಾನ್ಯತೆ ಹಿಂಪಡೆವ ಅಧಿಕಾರ: ಸುಪ್ರೀಂ ಕೋರ್ಟ್‌ಗೆ ಅರ್ಜಿ

Published 27 ನವೆಂಬರ್ 2023, 16:14 IST
Last Updated 27 ನವೆಂಬರ್ 2023, 16:14 IST
ಅಕ್ಷರ ಗಾತ್ರ

ನವದೆಹಲಿ: ರಾಜಕೀಯ ಪಕ್ಷಗಳು ಕಾನೂನು ಉಲ್ಲಂಘಿಸಿದರೆ ಅಥವಾ ನೋಂದಣಿ ವಿಚಾರದಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಉಲ್ಲಂಘಿಸಿದರೆ ಅಂತಹ ಪಕ್ಷಗಳನ್ನು ಅಮಾನ್ಯ ಮಾಡುವ ಅಧಿಕಾರವು ಚುನಾವಣಾ ಆಯೋಗಕ್ಕೆ ಇರಬೇಕು ಎಂಬ ಮನವಿಯೊಂದಿಗೆ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳನ್ನು ಘೋಷಿಸುವುದು ಮತದಾರರಿಗೆ ಲಂಚ ನೀಡುವುದಕ್ಕೆ ಸಮ ಎಂದು ಉಪಾಧ್ಯಾಯ ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಈ ಅರ್ಜಿಗೆ ಸಂಬಂಧಿಸಿದಂತೆ ಇನ್ನಷ್ಟು ವಾದಗಳು ಇರುವ ಲಿಖಿತ ಹೇಳಿಕೆಯನ್ನು ಉಪಾಧ್ಯಾಯ ಅವರು ತಮ್ಮ ವಕೀಲರ ಮೂಲಕ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT