ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ; ವಜಾ

Published 20 ಮೇ 2024, 4:41 IST
Last Updated 20 ಮೇ 2024, 4:41 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.

ಭಾನುವಾರ ಸಂಜೆ, ಉಲುಬೇರಿಯಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

‘ಆರೋಪಿತ ಯೋಧನನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಪೊಲೀಸ್ ವರದಿಗಾಗಿ ನಾವು ಕಾಯುತ್ತಿದ್ದೇವೆ. ತಪ್ಪಿತಸ್ಥರೆಂದು ಸಾಬೀತಾದರೆ, ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ 7 ಲೋಕಸಭಾ ಕ್ಷೇತ್ರಗಳಲ್ಲಿ ಭಾರಿ ಭದ್ರತೆಯ ನಡುವೆ ಮತದಾನ ನಡೆಯುತ್ತಿದೆ.

ಶೇಕಡ 57ರಷ್ಟು ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಿರುವ ಚುನಾವಣಾ ಆಯೋಗವು 30,000 ಪೊಲೀಸರ ಜೊತೆ 60,000 ಕೇಂದ್ರೀಯ ಪಡೆಗಳ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಈ ಹಿಂದೆ ನಡೆದ ಯಾವುದೇ ಹಂತದ ಚುನಾವಣೆಯಲ್ಲಿ ಇಷ್ಟು ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ ಆಗಿರಲಿಲ್ಲ ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT