ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಜೊತೆ ನೇರ ಮತ್ತು ಪರೋಕ್ಷ ಸಂಬಂಧ ಹೊಂದಿರುವ ಸುಮಾರು 1000 ವ್ಯಕ್ತಿಗಳ ಭದ್ರತೆಗೆ 2,100 ಮಂದಿ ಪೊಲೀಸರ ನಿಯೋಜನೆಯನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಈ ನಿಯೋಜನೆ ನ್ಯಾಯಸಮ್ಮತವಾಗಿದೆಯೇ ಎಂದು ಎರಡು ಅಥವಾ ಮೂರು ದಿನಗಳಲ್ಲಿ ವೃತ್ತಿಪರ ಪರಿಶೀಲನೆ ನಡೆಸುವಂತೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕರಿಗೆ ಆಯೋಗ ಸೂಚನೆ ನೀಡಿದೆ ಎಂದು ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 23 ಮತ್ತು 29ರಂದು ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಪ್ರತಿಯೊಂದು ಬೆಳವಣಿಗೆ ಮೇಲೂ ನಿಗಾ ಇಟ್ಟಿದೆ.

ಚುನಾವಣೆ ಘೋಷಣೆಗೂ ಮುನ್ನ ಟಿಎಂಸಿ ಜೊತೆ ನೇರ ಸಂಪರ್ಕ ಹೊಂದಿದ್ದ 832 ಮಂದಿ, ಬೆಂಬಲಿಗರಾದ 144 ಮಂದಿಯ ಭದ್ರತೆಗೆ 2,185 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.