ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹5,000 ಕೋಟಿ ವಂಚನೆ: ದೆಹಲಿ ಮೂಲದ ವ್ಯಕ್ತಿ ಬಂಧನ

Published 13 ಮಾರ್ಚ್ 2024, 16:00 IST
Last Updated 13 ಮಾರ್ಚ್ 2024, 16:00 IST
ಅಕ್ಷರ ಗಾತ್ರ

ನವದೆಹಲಿ : ಸೈಬರ್‌ ಅಪರಾಧ ಮತ್ತು ಆನ್‌ಲೈನ್‌ ಗೇಮಿಂಗ್‌ ಮೂಲಕ ₹5,000 ಕೋಟಿ ವಂಚನೆ ಮಾಡಿದ್ದಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರನ್ನು ಇತ್ತೀಚೆಗೆ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ.

ದೆಹಲಿಯ ಗ್ರೇಟರ್‌ ಕೈಲಾಶ್‌ ಮೂಲದ ಆಶಿಶ್‌ ಕಕ್ಕರ್‌ ಬಂಧಿತ ವ್ಯಕ್ತಿ. ಮಾ.2ರಂದು ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತನಿಖಾ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.

ಹಣ ಅಕ್ರಮ ವರ್ಗಾವಣೆ ತಡೆಕಾಯ್ದೆಗೆ ಸಂಬಂಧಿಸಿದ  ವಿಶೇಷ ನ್ಯಾಯಾಲಯವು ಆರೋಪಿಯನ್ನು ಮಾ.12ರ ವರೆಗೆ ಇ.ಡಿ ವಶಕ್ಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT