ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶಾನಲಯವು (ಇ.ಡಿ), ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟನನ್ನು ಶನಿವಾರ ಬಂಧಿಸಿದೆ.

ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ: ಜಾಹೀರಾತು ಕಂಪನಿ ನಿರ್ದೇಶಕ ಬಂಧನ

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಘವ್ ಮಾಗುಂಟ ಅವರನ್ನು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ.

ಪ್ರಕರಣದಲ್ಲಿ ಇದುವರೆಗೆ ಇ.ಡಿ ಎರಡು ಚಾರ್ಜ್‌ಶೀಟ್ ಫೈಲ್ ಮಾಡಿದೆ. ಕೇಂದ್ರ ತನಿಖಾ ದಳ ಸಹ ಎಫ್‌ಐಆರ್ ದಾಖಲಿಸಿದೆ.

ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.