ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಇ.ಡಿಯಿಂದ ಪಿಎಫ್‌ಐಗೆ ಸೇರಿದ ಬ್ಯಾಂಕ್ ಖಾತೆಗಳು ಮುಟ್ಟುಗೋಲು

Last Updated 1 ಜೂನ್ 2022, 14:27 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಡಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಅದಕ್ಕೆ ಸಂಬಂಧಿಸಿದ ರಿಹಾಬ್ ಇಂಡಿಯಾ ಫೌಂಡೇಷನ್‌ಗೆ ಸೇರಿದ 33 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

‘ಈ ಖಾತೆಗಳಲ್ಲಿ ₹68 ಲಕ್ಷಕ್ಕೂ ಹೆಚ್ಚು ಹಣವಿದ್ದು, ಅಕ್ರಮವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯಡಿ (‍ಪಿಎಂಎಲ್‌ಎ) ಈ ಆದೇಶ ಹೊರಡಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐಗೆ ಸೇರಿದ 23 ಖಾತೆಗಳ₹59,12,051 ಹಾಗೂ ರಿಹಾಬ್ಇಂಡಿಯಾ ಸಂಘಟನೆಗಳ 10 ಖಾತೆಗಳಲ್ಲಿದ್ದ ₹9,50,030 ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT