ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಎಪಿ ಮುಗಿಸಲು ಕೇಂದ್ರ ಸರ್ಕಾರ ದೊಡ್ಡ ಪಿತೂರಿ: ಪಂಕಜ್ ಗುಪ್ತಾ ಆರೋಪ

Published 9 ಜುಲೈ 2024, 14:01 IST
Last Updated 9 ಜುಲೈ 2024, 14:01 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಎಪಿ ವಿರುದ್ಧ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಗುಪ್ತಾ ಅವರು ಮಂಗಳವಾರ ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿಯನ್ನು ಹೆಸರಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಪೂರಕ ಚಾರ್ಜ್ ಶೀಟ್ ಕುರಿತು ಅವರು ಈ ಆರೋಪ ಮಾಡಿದ್ದಾರೆ. 

ಪಂಜಾಬ್ ಮತ್ತು ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿಯನ್ನು ಯಾವುದೇ ಬೆಲೆ ತೆತ್ತಾದರೂ ಮುಗಿಸಲು ಬಿಜೆಪಿ ಬಯಸುತ್ತಿದೆ ಎಂದು ಗುಪ್ತಾ ಆರೋಪಿಸಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಏಳನೇ ಪೂರಕ ಚಾರ್ಜ್ ಶೀಟ್ ಅನ್ನು ಸಿಟಿ ನ್ಯಾಯಾಲಯವು ಮಂಗಳವಾರ ಪರಿಗಣಿಸಿದೆ.

ಕೇಂದ್ರೀಯ ತನಿಖಾ ಸಂಸ್ಥೆಯು ಪೂರಕ ಚಾರ್ಜ್ ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಎಎಪಿಯನ್ನು ಹೆಸರಿಸಿದೆ.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಚಾರ್ಜ್ ಶೀಟ್ ಸಂಬಂಧ ಕೇಜ್ರಿವಾಲ್ ಅವರಿಗೆ ಜುಲೈ 12ಕ್ಕೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT