ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾದೇವ್‌ ಆ್ಯಪ್‌ ಪ್ರಕರಣ: ಕೆಲವೆಡೆ ಇ.ಡಿ ಶೋಧ

Published 28 ಫೆಬ್ರುವರಿ 2024, 15:59 IST
Last Updated 28 ಫೆಬ್ರುವರಿ 2024, 15:59 IST
ಅಕ್ಷರ ಗಾತ್ರ

ಮುಂಬೈ: ಮಹಾದೇವ್‌ ಆನ್‌ಲೈನ್‌ ಗೇಮಿಂಗ್‌ ಮತ್ತು ಬೆಟ್ಟಿಂಗ್ ಅಪ್ಲಿಕೇಷನ್‌ನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಬುಧವಾರ ಮುಂಬೈ, ಪಶ್ಚಿಮ ಬಂಗಾಳ ಮತ್ತು ದೆಹಲಿ–ಎನ್‌ಸಿಆರ್‌ನ ಕೆಲ ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಪ್ರಕರಣದಲ್ಲಿ ಛತ್ತೀಸಗಢದ ವಿವಿಧ ಹಿರಿಯ ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಇ.ಡಿ ಸುಮಾರು 15 ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಒಂಬತ್ತು ಜನರನ್ನು ಬಂಧಿಸಲಾಗಿದೆ.

ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ನಿಂದ ಬರುತ್ತಿದ್ದ ಅಕ್ರಮ ಹಣವನ್ನು ಛತ್ತೀಸಗಢದ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಲಂಚ ನೀಡಲು ಬಳಸಲಾಗಿದೆ ಎಂದು ಇ.ಡಿ ಈ ಹಿಂದೆ ಹೇಳಿತ್ತು.

ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆ ಮತ್ತು ಪಾವತಿ ವಿಧಾನಗಳೊಂದಿಗೆ ಹೊಂದಿರುವ ಲಿಂಕ್‌ಗಳಿಗೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿ ಮತ್ತು ಬಾಲಿವುಡ್‌ ನಟರನ್ನು ಇ.ಡಿ ಈಗಾಗಲೇ ವಿಚಾರಣೆ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಪ್‌ನ ಪ್ರವರ್ತಕರಾದ ಸೌರಭ್‌ ಚಂದ್ರಕರ್‌, ರವಿ ಉಪ್ಪಲ್‌ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇಲ್ಲಿಯವರೆಗೆ ಎರಡು ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT