ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕ್ಫ್ ಮಂಡಳಿ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ

Published 9 ಜನವರಿ 2024, 13:31 IST
Last Updated 9 ಜನವರಿ 2024, 13:31 IST
ಅಕ್ಷರ ಗಾತ್ರ

ನವದೆಹಲಿ: ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅವರು ದೆಹಲಿ ವಕ್ಫ್ ಮಂಡಳಿ ಅಧ್ಯಕ್ಷರಾಗಿದ್ದ ವೇಳೆ, ನೇಮಕಾತಿ ಮತ್ತು ಆಸ್ತಿಗಳ ಗುತ್ತಿಗೆ ನೀಡುವಾಗ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. 

ಈ ಪಟ್ಟಿಯಲ್ಲಿ, 2023ರ ನವೆಂಬರ್‌ನಲ್ಲಿ ಬಂಧನವಾಗಿರುವ ಜೀಶಾನ್ ಹೈದರ್, ದಾವೂದ್ ನಾಸಿರ್ ಹಾಗೂ ಜಾವೇದ್ ಇಮಾಮ್ ಸಿದ್ದಿಕಿ ಸೇರಿದಂತೆ ಐವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಓಖ್ಲಾ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ ಖಾನ್ ಅವರನ್ನು ಆರೋಪಿ ಎಂದು ಉಲ್ಲೇಖಿಸಲಾಗಿಲ್ಲ ಎಂದು ತಿಳಿದುಬಂದಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT