ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಿಎಂ ವೀರಭದ್ರಸಿಂಗ್‌ ಮಗನ ವಿರುದ್ಧ ಇ.ಡಿ.ಯಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ
Last Updated 21 ಜುಲೈ 2018, 14:37 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್‌ ಅವರ ಮಗ ವಿಕ್ರಮಾದಿತ್ಯಸಿಂಗ್‌ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಶನಿವಾರ ದೆಹಲಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಜುಲೈ 24ರಂದು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.

ತಾರಣಿ ಇನ್ಫ್ರಾಸ್ಟ್ರಕ್ಚರ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ವಕಾಮುಲ್ಲಾ ಚಂದ್ರಶೇಖರ್‌ ಹಾಗೂ ರಾಮಪ್ರಕಾಶ್‌ ಭಾಟಿಯಾ ಅವರನ್ನು ಆರೋಪಿಗಳು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

2009ರಿಂದ 2011ರ ಅವಧಿಯಲ್ಲಿ ಸಿಂಗ್‌ ಅವರು ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಈ ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನುವ ಆರೋಪವಿದೆ.

2015ರ ಸೆಪ್ಟೆಂಬರ್‌ನಲ್ಲಿ ಸಿಬಿಐ ಸಲ್ಲಿಸಿದ ದೂರಿನಿಂದ ಇ.ಡಿ ಸ್ವಯಂಪ್ರೇರಿತವಾಗಿ, ಭ್ರಷ್ಟಾಚಾರ ನಿಗ್ರಹ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT