ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಹಣ ಅಕ್ರಮ ವರ್ಗಾವಣೆ ಕೇಸ್ ಹಾಕಿದ ಇ.ಡಿ

Published 4 ಮೇ 2024, 6:01 IST
Last Updated 4 ಮೇ 2024, 6:01 IST
ಅಕ್ಷರ ಗಾತ್ರ

ಲಖನೌ: ರೇವ್‌ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಲ್ವಿಶ್‌ ಯಾದವ್ ಮತ್ತು ಇತರ ಕೆಲವರ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಕಳೆದ ತಿಂಗಳು ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಪೊಲೀಸರು ಇದೇ ಪ್ರಕರಣದಲ್ಲಿ ಎಲ್ವಿಶ್‌ ಮತ್ತು ಆತನೊಂದಿಗೆ ಸಂಬಂಧ ಹೊಂದಿರುವ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಚಾರ್ಚ್‌ಶೀಟ್‌ ಸಲ್ಲಿಸಿದ್ದರು. ಇದಾದ ಬಳಿಕ ಇ.ಡಿ ಹಣ ಅಕ್ರಮ ವರ್ಗಾವಣೆ ಕಾಯ್ಡೆ ಅಡಿಯಲ್ಲಿ ಆರೋಪ ಹೊರಿಸಿದೆ.

ರೇವ್, ಮನರಂಜನಾ ಪಾರ್ಟಿಗಳಿಗೆ ಅಕ್ರಮ ಹಣದ ಬಳಕೆ ಮಾಡಿದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇದರ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ.

ಯಾದವ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಕೆಲವರನ್ನು ತನಿಖೆಯ ಭಾಗವಾಗಿ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ವಿಶ್ ಯಾದವ್ ಅವರನ್ನು ಮಾರ್ಚ್ 17ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಆರೋಪಿಗಳ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT