ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ:ಪಿಎಫ್ಐ ವಿರುದ್ಧ ಇ.ಡಿಯಿಂದ ಪೂರಕ ದೋಷಾರೋಪ ಪಟ್ಟಿ

Published 21 ಅಕ್ಟೋಬರ್ 2023, 14:53 IST
Last Updated 21 ಅಕ್ಟೋಬರ್ 2023, 14:53 IST
ಅಕ್ಷರ ಗಾತ್ರ

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಿಗಾಗಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧ ಜಾರಿ ನಿರ್ದೇಶನಾಲಯ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ಈ ಕುರಿತ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಚಿನ್ ಗುಪ್ತಾ ಅವರ ಮುಂದೆ ಜಾರಿ ನಿರ್ದೇಶನಾಲಯ ಹೆಚ್ಚುವರಿ ದೋಷಾರೋಪದ ಪಟ್ಟಿಯನ್ನು ಸಲ್ಲಿಸಿತು. 

ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಿರುವ ಎಲ್ಲ ಸಾಕ್ಷ್ಯಾಧಾರಗಳು ಲಭ್ಯವಿವೆ ಎಂದು ಇ.ಡಿಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದರು. ₹120 ಕೋಟಿ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT