ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಕೆಎಸ್‌ಎಸ್‌ಬಿ ಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ: ಆರೋಪಿ ಇ.ಡಿ ವಶಕ್ಕೆ

Published 25 ಜೂನ್ 2024, 15:52 IST
Last Updated 25 ಜೂನ್ 2024, 15:52 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿಯ (ಜೆಕೆಎಸ್‌ಎಸ್‌ಬಿ) ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪರೀಕ್ಷೆ– 2022 ಹಗರಣದ ಪ್ರಮುಖ ಆರೋಪಿ ಯತಿನ್‌ ಯಾದವ್‌ ಅವರನ್ನು ಏಳು ದಿನಗಳು ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಇಲ್ಲಿಯ ವಿಶೇಷ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ.

ಹರಿಯಾಣದ ರೆವೇರಿ ಯತಿನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಸೋಮವಾರ ಬಂಧಿಸಲಾಗಿತ್ತು. ಇದಕ್ಕೂ ಮುಂಚೆ ಯತಿನ್‌ರ ಬ್ಯಾಂಕ್ ಖಾತೆಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿತ್ತು.

ಈ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ವಿವಿಧ ಹುದ್ದೆಗಳಿಗೆ ಆಯ್ಕೆ ಆದವರ ಪಟ್ಟಿಯನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತ ರದ್ದುಮಾಡಿತ್ತು. ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಯತಿನ್‌ ಸೇರಿ 33 ಆರೋಪಿಗಳ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಇ.ಡಿ ದೂರು ದಾಖಲಿಸಿಕೊಂಡಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT