ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮುಖ್ಯಮಂತ್ರಿಗೆ ಇ.ಡಿಯಿಂದ ಸಮನ್ಸ್‌

Published 11 ಡಿಸೆಂಬರ್ 2023, 4:39 IST
Last Updated 11 ಡಿಸೆಂಬರ್ 2023, 4:39 IST
ಅಕ್ಷರ ಗಾತ್ರ

ರಾಂಚಿ: ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.

ನಾಳೆಯೊಳಗೆ ಇಲ್ಲಿನ ಇ.ಡಿ ಕಚೇರಿಯಲ್ಲಿ  ಭ್ರಷ್ಟಾಚಾರ ನಿಗ್ರಹ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲು ಕೇಳಲಾಗಿದೆ.

ಇದು ಸೊರೇನ್ ಅವರಿಗೆ ನೀಡಲಾದ ಆರನೇ ನೋಟಿಸ್ ಆಗಿದೆ, ಆದರೆ ಅವರು ಇ.ಡಿ ಕ್ರಮದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅವರನ್ನು ಪದಚ್ಯುತಿಗೊಳಿಸುವುದಾಗಲೀ, ಬಂಧಿಸುವ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ.

ಜಾರ್ಖಂಡ್‌ನಲ್ಲಿ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆ ನಡೆಯುತ್ತಿದೆ ಎಂಬ ಆರೋಪದಡಿ ಇ.ಡಿ ತನಿಖೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 14 ಜನರನ್ನು ಇ.ಡಿ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT