ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಂಟು ಹೊಂದಿರುವ ರಾಜಕೀಯ ಪಕ್ಷ ಎಸ್ಡಿಪಿಐ ವಿರುದ್ದ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ತಮಿಳುನಾಡಿನ ಕೋಯಮತ್ತೂರಿನಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದೆ ಎಂದ ಅಧಿಕೃತ ಮೂಲಗಳು ತಿಳಿಸಿವೆ.
.ಕೇರಳದ ಪ್ರಾಧ್ಯಾಪಕರ ಕೈ ಕತ್ತರಿಸಿದ ಪ್ರಕರಣ; PFI ಕಾರ್ಯಕರ್ತನ ಬಂಧಿಸಿದ NIA.
ವಾದಿ ಉರ್ ರೆಹಮಾನ್ ಜೈನುಲಾಬಿದೀನ್ ಎಂಬವರನ್ನು ಹಣ ಅಕ್ರಮ ತಡೆ ಕಾಯ್ದೆಯಡಿ ಕೊಯಮತ್ತೂರಿನ ಮೇಟ್ಟುಪಾಲಯಂ ಎಂಬಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಜೈನುಲಾಬಿದೀನ್ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ. ಅವರನ್ನು ದೆಹಲಿಗೆ ಕರೆತರಲಾಗಿದ್ದು, ವಿಶೇಷ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
.RSS ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣ: PFI ಸದಸ್ಯನ ಬಂಧಿಸಿದ NIA.
ಪ್ರಕರಣ ಸಂಬಂಧ ಗುರುವಾರ ತಮಿಳುನಾಡು, ರಾಜಸ್ಥಾನ, ಪಶ್ಚಿಮ ಬಂಗಾಳ ಹಾಗೂ ಕೇರಳದಲ್ಲಿ ಗುರುವಾರ ಇ.ಡಿ ದಾಳಿ ನಡೆಸಿತ್ತು.

ಮಾರ್ಚ್ ಮೊದಲ ವಾರದಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯವು ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿಯವರನ್ನು ಬಂಧಿಸಿತ್ತು.
.ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ SDPI ಕಚೇರಿಗಳ ಮೇಲೆ ಇ.ಡಿ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.