ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಯಲ್ ಜಾಮೀನು ಅರ್ಜಿಗೆ ಇ.ಡಿ ವಿರೋಧ

Published 3 ಮೇ 2024, 12:19 IST
Last Updated 3 ಮೇ 2024, 12:19 IST
ಅಕ್ಷರ ಗಾತ್ರ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಕೋರಿರುವ ಮಧ್ಯಂತರ ವೈದ್ಯಕೀಯ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಿರೋಧಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಅವರು ಒಂದು ತಿಂಗಳು ವಾಸ್ತವ್ಯವನ್ನು ಮುಂದುವರಿಸಬಹುದು ಎಂದು ಶುಕ್ರವಾರ ಹೇಳಿದೆ.

‘ನಾನು ಮತ್ತು ನನ್ನ ಪತ್ನಿ ಅನಿತಾ ಗೋಯಲ್ ಇಬ್ಬರೂ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವೈದ್ಯಕೀಯ ಮತ್ತು ಮಾನವೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ’ ನರೇಶ್ ಕೋರಿದ್ದಾರೆ. 

ಮೇ 6ರಂದು ಆದೇಶ ನೀಡುವುದಾಗಿ ನ್ಯಾಯಮೂರ್ತಿ ಎನ್‌.ಜೆ. ಜಾಮದಾರ್ ಅವರು ಇದ್ದ ಏಕ ಸದಸ್ಯ ಪೀಠ ಹೇಳಿದೆ. 

ಫೆಬ್ರುವರಿಯಲ್ಲಿ ವಿಶೇಷ ನ್ಯಾಯಲಯವು ಗೋಯಲ್ ಅವರಿಗೆ ಜಾಮೀನು ನಿರಾಕರಿಸಿತ್ತು. ಆದರೆ ಅವರ ಆಯ್ಕೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಮತ್ತು ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿತ್ತು.

ವೈದ್ಯಕೀಯ ನೆಲೆಗಟ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಗೋಯಲ್ ಕಳೆದ ವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT