ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರವಿಂದ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

Published 22 ಮಾರ್ಚ್ 2024, 9:17 IST
Last Updated 22 ಮಾರ್ಚ್ 2024, 9:17 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಇಂದು (ಶುಕ್ರವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ.

ಎಎಸ್‌ಜಿ (ಹೆಚ್ಚುವರಿ ಸಾಲಿಸಿಟರ್ ಜನರಲ್) ಎಸ್‌. ವಿ ರಾಜು ಅವರು ತನಿಖಾ ಸಂಸ್ಥೆಯ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ಇ.ಡಿ ವಿಶೇಷ ವಕೀಲ ಜೊಹೆಬ್‌ ಹೊಸೈನ್‌ ತಿಳಿಸಿದ್ದಾರೆ. ಅರವಿಂದ ಕೇಜ್ರಿವಾಲ್‌ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ನ್ಯಾಯಾಲಯದ ಆವರಣ ಮತ್ತು ಸುತ್ತಮುತ್ತ ಬಿಗಿ ಭದ್ರತೆಯೊಂದಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಕೇಜ್ರಿವಾಲ್‌ ಅವರನ್ನು ಹಾಜರುಪಡಿಸಲಾಯಿತು.

ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ತಮ್ಮ ಮನವಿಯನ್ನು ಹಿಂಪಡೆದ ಸ್ವಲ್ಪ ಸಮಯದ ಬಳಿಕ ಕೇಜ್ರಿವಾಲ್‌ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT