ನವದೆಹಲಿ: ಅರಣ್ಯ ಇಲಾಖೆಯ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಇಬ್ಬರು ಮಾಜಿ ಅರಣ್ಯ ಸಚಿವರು ಮತ್ತು ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ದಾಖಲೆಗಳು, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದೆ.

ಕಾಂಗ್ರೆಸ್ ನಾಯಕರಾದ ಸಾಧು ಸಿಂಗ್ ಧರ್ಮ್‌ಸೋತ್ ಮತ್ತು ಸಂಗತ್ ಸಿಂಗ್ ಗಿಲ್ಜಿಯಾ ವಿರುದ್ಧ ಇ.ಡಿ ಕಾರ್ಯಾಚರಣೆ ನಡೆಸಿದೆ.

ರಾಜ್ಯ ಅರಣ್ಯ ಇಲಾಖೆಯಲ್ಲಿ ಮರಗಳನ್ನು ಕಡಿಯಲು ಪರವಾನಿಗೆ ನೀಡುವುದು ಸೇರಿದಂತೆ ಇಲಾಖೆಯಲ್ಲಿ ವರ್ಗಾವಣೆ ಹಾಗೂ ಪೋಸ್ಟಿಂಗ್‌ನಲ್ಲಿ ಲಂಚ ಪಡೆದಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ ಹೇಳಿದೆ.

ನವೆಂಬರ್ 30ರಂದು ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಧರ್ಮ್‌ಸೋತ್, ಗಿಲ್ಜಿಯಾ ಅವರ ಆಪ್ತರು, ಅರಣ್ಯ ಅಧಿಕಾರಿಗಳು ಮತ್ತು ಕೆಲವು ಖಾಸಗಿ ವ್ಯಕ್ತಿಗಳ ಮನೆ ಮೇಲೂ ಇ.ಡಿ ದಾಳಿ ನಡೆಸಿತ್ತು.

ಐದು ಬಾರಿ ಶಾಸಕ ಧರ್ಮ್‌ಸೋತ್ (63) ಅವರನ್ನು ಈ ವರ್ಷದ ಆರಂಭದಲ್ಲಿ ಅಕ್ರಮ ಅಸ್ತಿ ಪ್ರಕರಣದಲ್ಲಿ ವಿಜಿಲೆನ್ಸ್ ಬಂಧಿಸಿತ್ತು. ಗಿಲ್ಜಿಯಾ ಅವರು ಹೋಶಿಯಾಪುರದ ಶಾಸಕರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.