ನವದೆಹಲಿ (ಪಿಟಿಐ): ಮನೆ ಖರೀದಿದಾರರಿಗೆ ಭಾರಿ ಪ್ರಮಾಣದಲ್ಲಿ ವಂಚಿಸಿರುವ ಪ್ರಕರಣದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಜೆಪೀ ಇನ್ಫ್ರಾಟೆಕ್, ಜೈಪ್ರಕಾಶ್ ಅಸೋಸಿಯೇಟ್ಸ್ ಮತ್ತು ಇತರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶುಕ್ರವಾರ ಶೋಧ ನಡೆಸಿದೆ.

ಇದು ಸುಮಾರು ₹ 12,000 ಕೋಟಿ ಮೌಲ್ಯದ ವಂಚನೆ ಪ್ರಕರಣವಾಗಿದ್ದು, ಹಣದ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್ಎ) ದೆಹಲಿ– ಎನ್ಸಿಆರ್, ಮುಂಬೈನಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಮನೆ ಖರೀದಿದಾರರು ಮತ್ತು ಹೂಡಿಕೆದಾರರಿಗೆ ಜೆಪೀ ಇನ್ಫ್ರಾಟೆಕ್, ಜೈಪ್ರಕಾಶ್ ಅಸೋಸಿಯೇಟ್ಸ್ ಮತ್ತು ಇತರ ಕಂಪನಿಗಳು ಸುಮಾರು ₹12,000 ಕೋಟಿ ವಂಚಿಸಿವೆ ಎಂಬ ಆರೋಪದ ಮೇರೆಗೆ ಈ ದಾಳಿ ನಡೆದಿದೆ ಎಂದು ಇ.ಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಮೆಂಟ್, ನಿರ್ಮಾಣ, ರಿಯಲ್, ಎಸ್ಟೇಟ್ ಮತ್ತ ಆತಿಥ್ಯ ವ್ಯವಹಾರಗಳಲ್ಲಿ ತೊಡಗಿರುವ ಜೈಪ್ರಕಾಶ್ ಅಸೋಸಿಯೇಟ್ಸ್ ಲಿಮಿಟೆಡ್ ಪ್ರಸ್ತುತ ದಿವಾಳಿತನ ಪ್ರಕ್ರಿಯೆಗಳನ್ನು ಎದುರಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.