ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಶೋಧಕಾರ್ಯ ಕೈಗೊಂಡಿದ್ದಾರೆ.

‘ಅಕ್ರಮ ಹಣ ವರ್ಗಾವಣೆ ನಿಯಂತ್ರ ಕಾಯ್ದೆ (ಪಿಎಂಎಲ್‌ಎ) ಅಡಿ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ಸಚಿವರಿಗೆ ಸೇರಿದ ಕೆಲವು ಜಾಗಗಳಲ್ಲಿ ಶೋಧಕಾರ್ಯ ಕೈಗೊಳ್ಳಲಾಗಿದೆ’ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಅಧಿಕಾರಿಗಳು, ಎಫ್‌ಐಆರ್ ಆಧರಿಸಿ ಕಳೆದ ತಿಂಗಳು ಅನಿಲ್ ದೇಶಮುಖ್ ಸೇರಿದಂತೆ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಸೂಚಿಸಿರುವ ಬಾಂಬೆ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ ಮೊದಲ ಬಾರಿಗೆ ಅನಿಲ್ ದೇಶಮುಖ್ ಅವರನ್ನು ಪ್ರಾಥಮಿಕ ವಿಚಾರಣೆ ನಡೆಸಿತ್ತು. ನಂತರ ಇ.ಡಿ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.