ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಷ್ಣೋಯಿ ಗ್ಯಾಂಗ್ ವಿರುದ್ದ ಪ್ರಕರಣ: ಹರಿಯಾಣ, ರಾಜಸ್ಥಾನದಲ್ಲಿ ಇ.ಡಿ ದಾಳಿ

Published 5 ಡಿಸೆಂಬರ್ 2023, 5:30 IST
Last Updated 5 ಡಿಸೆಂಬರ್ 2023, 5:30 IST
ಅಕ್ಷರ ಗಾತ್ರ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ(ಇ.ಡಿ), ಹರಿಯಾಣ ಮತ್ತು ರಾಜಸ್ಥಾನದ ಹಲವೆಡೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳಡಿಯಲ್ಲಿ ಎರಡು ರಾಜ್ಯಗಳ ಸುಮಾರು ಹನ್ನೆರಡು ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.

ಸದ್ಯ ಜೈಲಿನಲ್ಲಿರುವ ಬಿಷ್ಣೋಯ್, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಬಿಷ್ಣೋಯಿ ಗ್ಯಾಂಗ್‌ ವಿರುದ್ಧ ಎನ್‌ಐಎ ಈಗಾಗಲೇ ದೋಷಾರೋಪಪಟ್ಟಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT