ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾರ್ಖಂಡ್‌ ಸಿಎಂ ಮಾಧ್ಯಮ ಸಲಹೆಗಾರರ ಮನೆ ಮೇಲೆ ಇ.ಡಿ ದಾಳಿ

Published 3 ಜನವರಿ 2024, 15:50 IST
Last Updated 3 ಜನವರಿ 2024, 15:50 IST
ಅಕ್ಷರ ಗಾತ್ರ

ರಾಂಚಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿನ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಮಾಧ್ಯಮ ಸಲಹೆಗಾರ, ಸಾಹೀಬ್‌ಗಂಜ್‌ ಜಿಲ್ಲೆಯ ಅಧಿಕಾರಿ ಮತ್ತು ಮಾಜಿ ಶಾಸಕರೊಬ್ಬರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. 

ರಾಂಚಿಯೂ ಸೇರಿದಂತೆ ಜಾರ್ಖಂಡ್‌ನ ಹತ್ತಾರು ಕಡೆಗಳಲ್ಲಿ ಮತ್ತು ರಾಜಸ್ಥಾನದ ಕೆಲವೆಡೆ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.  

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಪ್ರಸಾದ್‌ ಅಲಿಯಾಸ್‌ ಪಿಂಟು, ಸಾಹೀಬ್‌ಗಂಜ್‌ನ ಜಿಲ್ಲಾಧಿಕಾರಿ, ಮಾಜಿ ಶಾಸಕ ಪಪ್ಪು ಯಾದವ್‌, ವಾಸ್ತುಶಿಲ್ಪಿ ಮತ್ತು ಬಂದಿಖಾನೆ ಇಲಾಖೆಯ ಹಲವು ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. 

ಈ ಪ್ರಕರಣದಲ್ಲಿ ಪ್ರಸಾದ್‌ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT