ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌: ಗ್ರಾಮೀಣಾಭಿವೃದ್ಧಿ ಇಲಾಖೆ ಮೇಲೆ ಇ.ಡಿ ದಾಳಿ

Published 8 ಮೇ 2024, 13:24 IST
Last Updated 8 ಮೇ 2024, 13:24 IST
ಅಕ್ಷರ ಗಾತ್ರ

ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಶೋಧ ನಡೆಸಿತು ಎಂದು ಮೂಲಗಳು ತಿಳಿಸಿವೆ. 

ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮತ್ತು ಅವರ ಮನೆಗೆಲಸ ಮಾಡುತ್ತಿದ್ದ ಜಹಾಂಗೀರ್ ಆಲಂ  ಅವರು ವಿಚಾರಣೆ ವೇಳೆ ನೀಡಿದ ಮಾಹಿತಿ ಆಧಾರದಲ್ಲಿ ಶೋಧ ನಡೆಸಲಾಗಿದೆ.

ಇಬ್ಬರನ್ನೂ ಇ.ಡಿ ಸೋಮವಾರ ಬಂಧಿಸಿದೆ. ಜಹಾಂಗೀರ್‌ ಆಲಂ ಅವರಿಗೆ ಸಂಬಂಧಿಸಿದ ಸ್ಥಳಗಳಿಂದ ಸುಮಾರು ₹30 ಕೋಟಿ ನಗದನ್ನು ಇ.ಡಿ ವಶಪಡಿಸಿಕೊಂಡಿದೆ.

ಪ್ರಭಾವಿ ವ್ಯಕ್ತಿಗಳಿಂದ ಲಾಲ್‌ ‘ಕಮಿಷನ್‌’ ಪಡೆಯುತ್ತಿದ್ದರು ಎಂದು ಇ.ಡಿ ಕೋರ್ಟ್‌ಗೆ ಮಂಗಳವಾರ ತಿಳಿಸಿತ್ತು.  ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ‘ಅಡಿಯಿಂದ ಮುಡಿಯವರೆಗೆ’ ಹಣ ಅಕ್ರಮ ವರ್ಗಾವಣೆ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದು ಕೂಡ ಇ.ಡಿ. ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT