ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರ್‌.ಜಿ.ಕರ್‌ ಆಸ್ಪತ್ರೆ ಹಣಕಾಸು ಅವ್ಯವಹಾರ: ಕೋಲ್ಕತ್ತದ 6 ಸ್ಥಳಗಳಲ್ಲಿ ED ದಾಳಿ

Published : 17 ಸೆಪ್ಟೆಂಬರ್ 2024, 4:31 IST
Last Updated : 17 ಸೆಪ್ಟೆಂಬರ್ 2024, 4:31 IST
ಫಾಲೋ ಮಾಡಿ
Comments

ಕೋಲ್ಕತ್ತ: ಆರ್‌.ಜಿ. ಕರ್‌ ಆಸ್ಪತ್ರೆಯಲ್ಲಿ ನಡೆದಿದ ಎನ್ನಲಾದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಟಿಎಂಸಿ ಶಾಸಕರೊಬ್ಬರ ಮನೆ ಸೇರಿದಂತೆ ಕೋಲ್ಕತ್ತದ ಆರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

ಟಿಎಂಸಿಯ ಸೆರಾಂಪೋರ್ ಶಾಸಕ ಸುದೀಪ್ತೋ ರಾಯ್ ಅವರ ನಿವಾಸ ಮತ್ತು ಔಷಧಿ ವ್ಯಾಪಾರಿಯೊಬ್ಬರ ಮನೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ, ಜತೆಗೆ ಇತರ ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ದಾಳಿ ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರಗಳ ಕುರಿತ ತನಿಖೆಯ ಭಾಗವಾಗಿದೆ. ನಮಗೆ ಕೆಲವು ಖಚಿತ ಮಾಹಿತಿ ದೊರೆತ ಕಾರಣ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಈ ಪ್ರಕರಣದ ಭಾಗವಾಗಿ ಈಗಾಗಲೇ ಸಿಬಿಐ ಆರ್‌.ಜಿ.ಕರ್‌ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಮತ್ತು ಮೂವರು ಸಹಚರರನ್ನು ಬಂಧಿಸಿದೆ. ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ಬಳಿಕ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT