ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಉದ್ಯೋಗ ಹಗರಣ: ಪ.ಬಂಗಾಳ ಸಚಿವ ಚಂದ್ರನಾಥ್ ನಿವಾಸದಲ್ಲಿ ಇ.ಡಿ ಶೋಧ

Published 22 ಮಾರ್ಚ್ 2024, 9:46 IST
Last Updated 22 ಮಾರ್ಚ್ 2024, 9:46 IST
ಅಕ್ಷರ ಗಾತ್ರ

ಕೋಲ್ಕತ್ತ: ಶಾಲಾ ಉದ್ಯೋಗ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ತಂಡವು ಶುಕ್ರವಾರ ಪಶ್ಚಿಮ ಬಂಗಾಳದ ಸಚಿವ ಚಂದ್ರನಾಥ್ ಸಿನ್ಹಾ ಅವರ ನಿವಾಸದಲ್ಲಿ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿರ್‌ಭೂಮ್‌ ಜಿಲ್ಲೆಯ ಬೋಲ್‌ಪುರಲ್ಲಿರುವ ಚಂದ್ರನಾಥ್ ಸಿನ್ಹಾ ನಿವಾಸದ ಮೇಲೆ ಕೇಂದ್ರ ಪಡೆಗಳೊಂದಿಗೆ ದಾಳಿ ನಡೆಸಿದ ಇ.ಡಿ ತಂಡ ಶೋಧ ನಡೆಸಿತು.

ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಚಂದ್ರನಾಥ್ ಸಿನ್ಹಾ ಅವರು ಎಂಎಸ್‌ಎಂಇ ಮತ್ತು ಜವಳಿ ಖಾತೆಗಳನ್ನು ಹೊಂದಿದ್ದಾರೆ.

ಶಾಲಾ ನೇಮಕಾತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಸಂಬಂಧಿಸಿದಂತೆ ಶೋಧ ನಡೆಸಲಾಯಿತು. ಈ ವೇಳೆ ಸಚಿವರು ಮನೆಯಲ್ಲಿ ಇರಲಿಲ್ಲ. ಅವರ ಕುಟುಂಬದೊಂದಿಗೆ ಮಾತನಾಡಿದ್ದೇವೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಇ.ಡಿ ದಾಳಿ ಕುರಿತು ಪ್ರತಿಕ್ರಿಯಿಸಿರುವ ಚಂದ್ರನಾಥ್, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಏತನ್ಮಧ್ಯೆ, ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಲೇಕ್ ಟೌನ್ ಸೇರಿದಂತೆ ಕೋಲ್ಕತ್ತದ ವಿವಿಧ ಭಾಗಗಳಲ್ಲಿ ಕೆಲವು ಉದ್ಯಮಿಗಳ ನಿವಾಸಗಳಲ್ಲಿ ಇ.ಡಿ ಏಕಕಾಲದಲ್ಲಿ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮುನ್ನ ದನ ಕಳ್ಳಸಾಗಣೆ ಮತ್ತು ಕಲ್ಲಿದ್ದಲು ಹಗರಣದಲ್ಲಿ ಚಂದ್ರನಾಥ್ ಅವರಿಗೆ ಸಿಬಿಐ ಸಮನ್ಸ್ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT